Categories: Crime

ಸಂಪತ್ ನಾಯರ್ ಕೊಲೆ ಪ್ರಕರಣ: ಕೊಲೆ‌ ಆರೋಪಿಗಳ ಬಂಧನ: ಇಷ್ಟಕ್ಕೂ ಸಂಪತ್ ನಾಯರ್ ಕೊಲೆ‌ಯಾಗಿದ್ದು‌ ಯಾರಿಂದ‌, ಏಕೆ…?

ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ  ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.

ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.

ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು,  ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.

ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.

ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.

ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.

ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

5 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

16 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

17 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

18 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

18 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

21 hours ago