ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ರಾಜ್ಯದಾದ್ಯಂತ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.14ರ ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಹಿನ್ನೆಲೆ ಬಡ ಜನತೆಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ಮಹತ್ವದ ಯೋಜನೆ ‘ನಮ್ಮ ಕ್ಲಿನಿಕ್’ ದೊಡ್ಡಬಳ್ಳಾಪುರ ನಗರದಲ್ಲೂ ಉದ್ಘಾಟನೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಚಿವ ಎಂಟಿಬಿ ನಾಗರಾಜ್ , ಶಾಸಕ ವೆಂಕಟರಮಣಯ್ಯ, ಲೋಕ ಸಭಾ ಸದಸ್ಯರಾದ ಬಿಎನ್ ಬಚ್ಚೇಗೌಡ ಉಪಸ್ಥಿತರಿರಲಿದ್ದಾರೆ.

ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಪರಮೇಶ್ವರ ಮಾಹಿತಿ ನೀಡಿದ್ದೂ, ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು ಮತ್ತು ತಾಲ್ಲೂಕಿನ ಜನತೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದ ಯೋಜನೆ ಸದುಪಯೋಗ ಪಡಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್ ಮಾಹಿತಿ:

ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರಂದು 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯನಿರ್ವಹಿಸಲಿವೆ.

ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.

Leave a Reply

Your email address will not be published. Required fields are marked *