ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಫ್ಯಾಕ್ಟರಿ ಮುಂದೆ ಸಂಬಳಕ್ಕಾಗಿ ಕರವೇ ನಾರಾಯಣಗೌಡ ಬಣದಿಂದ‌ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು..

ಶರ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಂದರೆ, ಶೇ.70ರಷ್ಟು ಮಹಿಳಾ ಕಾರ್ಮಿಕರು, ಶೇ.30ರಷ್ಟು ಪುರುಷ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡುತ್ತಿಲ್ಲವೆಂದು  ಕಾರ್ಮಿಕರು ಆರೋಪಿಸಿ ಫ್ಯಾಕ್ಟರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.. ಸದ್ಯ 15 ದಿನದಿಂದ ಫ್ಯಾಕ್ಟರಿಗೆ ಬೀಗ ಹಾಕಲಾಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥನಾಯ್ಕ್, ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಮಾಲೀಕ ಹಾಗೂ ಆಡಳಿತ ಮಂಡಳಿ ಕಾರ್ಮಿಕರಿಂದ ಹಗಲಿರುಳು ದುಡಿಸಿಕೊಂಡು ಸಂಬಳ ನೀಡದೇ ಇದೀಗ ಫ್ಯಾಕ್ಟರಿಗೆ ಬೀಗ ಹಾಕಿಕೊಂಡು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಸಂಬಂಧಪಟ್ಟವರಿಗೆ ಕರೆ ಮಾಡಿದರೆ ಫೋನ್ ತೆಗೆಯುತ್ತಿಲ್ಲ. ಸಂಬಳವಿಲ್ಲದೇ ಈ ಬಡ ಕೂಲಿ ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ಕಾರ್ಮಿಕರಿಗೆ ಸಂಬಳವನ್ನು ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು…

ಮಹಿಳಾ ಕಾರ್ಮಿಕರಾದ ಶಿಲ್ಪಾ ಮಾತನಾಡಿ, ನಾವು ಈ ಕಂಪನಿಯಲ್ಲಿ ಹಗಲಿರುಳು ದುಡಿದಿದ್ದೇವೆ. ಸಂಬಳವನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡಿಲ್ಲ. ಸಂಬಳ ಇಲ್ಲದ ಕಾರಣ ಆಚೆಗಡೆ ಸಾಲ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಇದೀಗ ಸಾಲಗಾರರು ಮನೆ ಬಳಿ ಬರುತ್ತಿದ್ದಾರೆ. ಕಂಪನಿಯವರು ಸಂಬಳ ನೀಡದೆ ನಮ್ಮ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಮಗೆ ನಾವು ದುಡಿದ ಸಂಬಳ ಕೊಡಬೇಕು ಎಂದು ಆಗ್ರಹಿಸಿದರು..

Ramesh Babu

Journalist

Recent Posts

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

4 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

4 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

15 hours ago

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…

18 hours ago

ಮೀಸಲಾತಿ ಹೆಚ್ಚಳ ವಿಚಾರ: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಕುರಿತು ಸಂಪುಟದಲ್ಲಿ ಚರ್ಚೆ- ಡಿಸಿಎಂ ಡಾ ಜಿ.ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…

22 hours ago

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…

2 days ago