ಮೇ.23ರ ಬೆಳಗ್ಗೆ 11:30ಕ್ಕೆ ದೇವಾಲಯದಿಂದ ಹೊರಟ ದೇವಿಯ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯಗಳೊಂದಿಗೆ ಭಾಗವಹಿಸಿದ್ದ ಡೊಳ್ಳು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿದ್ದವು. ಮುತ್ಯಾಲಮ್ಮ ಸೇವಾ ದತ್ತಿ ಜಾತ್ರಾ ಮಹೋತ್ಸವದ ನೇತೃತ್ವವಹಿಸಿತ್ತು.
ಜಾತ್ರೆ ಅಂಗವಾಗಿ ದೇವಾಲಯದ ಸುತ್ತಲಿನ ಗ್ರಾಮಗಳಾದ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರು ಹೊಂಬಾಳೆಯಲ್ಲಿ ಸಿಂಗರಿಸಿಕೊಂಡು ಬಂದಿದ್ದ ವಿವಿಧ ಮಾದರಿಯ ಆರತಿಗಳನ್ನು ದೇವಿಗೆ ಬೆಳಗಿದರು.
ನಾಗಸಂದ್ರ, ದರ್ಗಾಜೋಗಿಹಳ್ಳಿ, ಕೊಡಿಗೆಹಳ್ಳಿ, ರೋಜಿಪುರ ಗ್ರಾಮಗಳಿಂದ ಜಾತ್ರೆಗೆ ವಿಶೇಷ ರಥಗಳೊಂದಿಗೆ ಮಹಿಳೆ ಯರು ಆರತಿಗಳೊಂದಿಗೆ ಆಗಮಿಸಿದ್ದರು. ಮುತ್ಯಾಲಮ್ಮ ದೇಗುಲದ ಸಮೀಪವಿರುವ ನವಗ್ರಹ ದೇವಾಲಯ ಹಾಗೂ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೇ.24ರಂದು ಹಗಲು ಪರಿಷೆ ನಡೆಯಲಿದೆ. ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು ಭಾಗವಹಿಸಿ ಪೂಜೆ ಸಲ್ಲಿಸಿಸರು. ಬಳಿಕ ಮಾತನಾಡಿದ ಅವರು ದೇವತಾ ಕಾರ್ಯಕಾರ್ಯಗಳಿಂದ ಮಾನವ ಕುಲಕ್ಕೆ ನೆಮ್ಮದಿ ಸಿಗುತ್ತದೆ.
ಪೂರ್ವಜರ ಕಾಲದಿಂದಲೂ ನಡೆಸಿಕೊಂಡಿ ಬಂದಿರುವ ಸಂಪ್ರದಾಯಗಳು ಇಂದಿಗೂ ಮುಂದುವರೆಯುತ್ತಿರುವುದು ಸಂತೋಷದ ವಿಚಾರ. ಜಾತ್ರಾ ಮಹೋತ್ಸವಗಳು ಕೇವಲ ಉತ್ಸವಕ್ಕೆ ಸೀಮಿತವಾಗದೆ ಸ್ನೇಹ, ಸಂಬಂಧ ಬೇಸುಗೆಗು ಕಾರಣಾವಾಗುತ್ತದೆ. ಇದರಿಂದ ಹಲವು ವರ್ಷಗಳಿಂದ ಕಳೆದುಕೊಂಡಿರುವ ಪ್ರೀತಿ, ವಿಶ್ವಾಸವು ಮರಳಿ ದೊರಯಲಿದೆ. ನಾಡಿಗೆ ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…