ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ ನೆರವೇರಿತು.

ಹಸಿ ಕರಗ ಉತ್ಸವವನ್ನು ಸಹಸ್ರಾರು ಜನ ವೀಕ್ಷಿಸಿದರು. ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ಪೂಜಾರಿ ವೈ.ಭೀಮರಾಜ್ ಹಸಿ ಕರಗವನ್ನು ಹೊತ್ತು ಕರಗದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೇ ಬಸ್‌ ನಿಲ್ದಾಣ, ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯ, 7 ಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಮೊದಲಾದೆಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಶುಕ್ರವಾರ ರಾತ್ರಿ ನಡೆಯಲಿರುವ ಶ್ರೀಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ದೇವಾಲಯವನ್ನು ವಿದ್ಯುತ್‌ ದೀಪಾಲಂಕಾರಗಳಿಂದ ಅಲಂಕರಿಸಲಾಗಿದೆ.

ನಗರದ ವಿವಿಧ ವೃತ್ತಗಳಲ್ಲಿ ತಮಿಳುನಾಡು ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್‌ ದೀಪಾಲಂಕಾರ, ಬೃಹತ್‌ ಕಟೌಟು ಮೆರುಗು ನೀಡಿವೆ. ಕರಗದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಕರಗ ಉತ್ಸವದ ದಿನದ‌ವರೆಗೆ ನಿತ್ಯ ಅಭಿಷೇಕ, ಪೊಂಗಲ್‌ ಸೇವೆ ನಡೆದವು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

3 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

8 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

10 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

21 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago