Categories: ಮೈಸೂರು

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ- ಸಿಎಂ ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನೇಮಕಗೊಂಡವರು. ಯಾವುದೇ ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರದಾದ್ಯಂತ ಚರ್ಚೆಯಾಗಬೇಕು ಎಂದರು.

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಜೊತೆಗಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ನ್ಯಾಯ ನನ್ನ ಪರವಾಗಿದೆ, ಇದನ್ನು ಎದುರಿಸಿ ಗೆಲ್ಲುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರಕ್ಕೆ ಕಳೆದ ಚುನಾವಣೆಯಲ್ಲಿ ಜನರ ಆಶೀರ್ವಾದ ಸಿಕ್ಕಿದೆ, ಅದಕ್ಕೆ ತಕ್ಕಂತೆ ನಾವು ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ. ಇದಕ್ಕೆ ರಾಜ್ಯಪಾಲರು ಅಡ್ಡಿಪಡಿಸಬಾರದು, ಅಡ್ಡಿಪಡಿಸಿದರೆ ನಾವು ಅನಿವಾರ್ಯವಾಗಿ ಪ್ರತಿರೋಧ ವ್ಯಕ್ತಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

ನಾನು ಯಾವ ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಯೇ? ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಾರೆ, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ರಾಜೀನಾಮೆ ನೀಡಿದ್ರಾ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ, ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ. ಹಾಗಾಗಿ ಈಗ ಸುಳ್ಳು ಆರೋಪದ ಹಾದಿ ಹಿಡಿದಿದ್ದಾರೆ ಎಂದು ಹೇಳಿದರು.

ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ಅನೇಕ ರಾಜ್ಯಗಳಲ್ಲಿ ಇಂದಿಗೂ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯಲ್ಲಿ ಈ ದ್ವಂದ್ವ ಧೋರಣೆ ಏಕೆ? ರಾಜ್ಯ ಬಿಜೆಪಿಯಲ್ಲಿ ತಪ್ಪು ಮಾಡದಿರುವ, ಭ್ರಷ್ಟಾಚಾರ ಮಾಡದಿರುವ ಒಬ್ಬ ನಾಯಕನಾದರೂ ಇದ್ದಾನ? ಎಂದು ಪ್ರಶ್ನೆ ಮಾಡಿದರು.

ರಾಜ್ಯ ಬಿಜೆಪಿ – ಜೆಡಿಎಸ್ ಹಾಗೂ ರಾಜ್ಯಪಾಲರು ನಮ್ಮ ವಿರುದ್ಧ ಎಷ್ಟೇ ಕಿರುಕುಳ ನೀಡಿದರೂ ನಾವು ಬಡವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ನನಗೆ ಬೆಂಬಲವನ್ನು ಸೂಚಿಸಿದ್ದಾರೆ. ನಮ್ಮ ಜೊತೆ ಜನರಿದ್ದಾರೆ, ಅವರಿಗಾಗಿ ನಮ್ಮ ಸರ್ಕಾರವಿದೆ ಎಂದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

7 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

10 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

11 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago