ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟೇಶ್ ರೆಡ್ಡಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟೇಶ್ ರೆಡ್ಡಿ, “ಭಾರತದ ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವಾಗಿದೆ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಕಲ್ಪಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ, ಪರಿಶ್ರಮ ಮತ್ತು ಅಪಾರ ಜ್ಞಾನದಿಂದ ರೂಪುಗೊಂಡ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ರಕ್ಷಿಸುವ ಮಹತ್ವದ ಶಕ್ತಿಯಾಗಿದೆ” ಎಂದು ತಿಳಿಸಿದರು.
ಕಾನೂನು ವಿದ್ಯಾರ್ಥಿಗಳಾದ ನಾವು ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಆಳವಾದ ಅರಿವು ಹೊಂದಿರಬೇಕು. ಕೇವಲ ಕಾನೂನಿನ ಅಧ್ಯಯನಕ್ಕೆ ಸೀಮಿತವಾಗದೆ, ಸಮಾಜದಲ್ಲಿ ನ್ಯಾಯ, ಸಮಾನತೆ ಮತ್ತು ಕಾನೂನಿನ ಅರಿವು ಮೂಡಿಸುವ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಸಂವಿಧಾನದ ಮೌಲ್ಯಗಳನ್ನು ಗೌರವಿಸಿ ಅವುಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಸಂವಿಧಾನದ ಮಹತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು.
12ನೇ ಶತಮಾನದ ಸಮಾಜ ಸುಧಾರಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…
ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…
ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ನಿನ್ನೆ ಸಂಜೆ ಬೀಗ…