ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ ಶಕ್ತಿ, ಬಡವರಿಗೆ ಭರವಸೆ ಮೂಡಿಸಿದ ಆಶಾಕಿರಣ ಹಾಗೂ ಪ್ರತಿಯೊಬ್ಬ ಭಾರತೀಯನಿಗೂ ಗೌರವಯುತವಾಗಿ ಬದುಕುವ ಹಕ್ಕು ಕಲ್ಪಿಸಿದ ಮಹಾನ್ ಮಾರ್ಗದರ್ಶಿಯಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗ ಅಧ್ಯಕ್ಷ ನರೇಶ್ ಸಿದ್ದೇನಾಯಕನಹಳ್ಳಿ ಅಭಿಪ್ರಾಯಪಟ್ಟರು.
ಇಂದು ನಗರದ ಸಿದ್ದೇನಾಯಕನಹಳ್ಳಿಯಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸುವ ಮೂಲಕ ಸಂವಿಧಾನ ದಿನ ಆಚರಣೆ ಮಾಡಿ ಅವರು ಮಾತನಾಡಿದರು.
ದೇವಸ್ಥಾನಕ್ಕೆ ಹೋಗುವುದು ನಮ್ಮ ನಂಬಿಕೆ, ಶಾಲೆಗೆ ಹೋಗುವುದು ನಮ್ಮ ಭವಿಷ್ಯ. ಆದರೆ ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನ ಯಾರೊಬ್ಬರ ಸ್ವತ್ತಲ್ಲ, ಅದು 140 ಕೋಟಿ ಭಾರತೀಯರ ಹಕ್ಕು, ಸ್ವಾತಂತ್ರ್ಯ ಮತ್ತು ಗೌರವದ ಪ್ರತೀಕವಾಗಿದೆ ಎಂದು ಹೇಳಿದರು.
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು, ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕು ಎಂದು ಅವರು ತಿಳಿಸಿದರು.
ಅಂಬೇಡ್ಕರ್ ಸ್ನೇಹದ ಬಳಗ ಉಪಾಧ್ಯಕ್ಷ ಮುನಿರಾಜು, ಸುಬ್ರಮಣಿ, ರಘು, ಗೌರವ ಅಧ್ಯಕ್ಷ ಮುನಿರಾಜು, ಖಜಾಂಚಿ ವಿಜಯ್ ಕುಮಾರ್, ಸದ್ಯರು ಸೇರಿದಂತೆ ಇತರರು ಇದ್ದರು.
ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ನಿನ್ನೆ ಸಂಜೆ ಬೀಗ…
ದೊಡ್ಡಬಳ್ಳಾಪುರ: ನಿಯಮಗಳನ್ನು ಗಾಳಿಗೆ ತೂರಿ, ಸಾಮರ್ಥ್ಯಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಲಾರಿಯೊಂದು ರಾತ್ರಿ ವೇಳೆ ದೊಡ್ಡಬಳ್ಳಾಪುರ-ದೇವನಹಳ್ಳಿ ಮಾರ್ಗದಲ್ಲಿ…
ದೊಡ್ಡಬಳ್ಳಾಪುರ: ರಕ್ತದಾನವು ಮಹಾದಾನವಾಗಿದ್ದು, ಒಬ್ಬ ವ್ಯಕ್ತಿ ಒಂದು ಬಾರಿ ರಕ್ತದಾನ ಮಾಡುವುದರಿಂದ ನಾಲ್ವರು ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಏಡ್ಸ್…
ದೊಡ್ಡಬಳ್ಳಾಪುರ: ನಗರದ ವಿವಾದಿತ ಕೆಮ್ಮಣ್ಣುಗುಂಡಿ ಸಾರ್ವಜನಿಕ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಪ್ರಭಾವಿಯೊಬ್ಬರು ಅತಿಕ್ರಮಣ ಮಾಡಿಕೊಂಡಿದ್ದು, ಒತ್ತುವರಿ ತೆರವುಗೊಳಿಸುವಂತೆ ಹಲವು…