Categories: ಕೋಲಾರ

ಸಂವಿಧಾನ ಉಳಿವಿಗಾಗಿ ಕದಸಂಸ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ: ಹೆಣ್ಣೂರು ಶ್ರೀನಿವಾಸ್

ಕೋಲಾರ: ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ಗಲಾಟೆ ಮಾಡಿ ದೇವರ ಹೆಸರಿನಲ್ಲಿ ಜನಗಳನ್ನು ಯಾಮಾರಿಸಿದ್ದು ಅಲ್ಲದೆ ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲು ಹೊರಟಿರುವ ಎನ್.ಡಿ.ಎ.ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷದ ಕೆ.ವಿ ಗೌತಮ್ ಅವರನ್ನು ಬೆಂಬಲಿಸಲಿದೆ ಎಂದು ಕದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಹತ್ತು ವರ್ಷಗಳ ಮೋದಿ ಸರಕಾರ ಮತ್ತು ರಾಜ್ಯದ ಹಿಂದಿನ ಬಿಜೆಪಿ ನೇತೃತ್ವದ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ನಿಂತಿದ್ದು ಸಾಮಾನ್ಯ ಜನರನ್ನು ಬೀದಿಗೆ ತಂದು ನಿಲ್ಲಿಸುವ ಕೆಲಸ ಮಾಡಿದ್ದಾರೆ. ಇದರ ಪರಿಣಾಮವಾಗಿ ಕಳೆದ 2023 ರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕದಸಂಸ ತೀರ್ಮಾನವನ್ನು ಕೈಗೊಂಡು ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲಾಗಿದೆ ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸಂಘಟನೆಯ ಮುಖಂಡರು ಕಾರ್ಯಕರ್ತರು ಶ್ರಮ ವಹಿಸಲಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಅನೇಕ ಆಶ್ವಾಸನೆಗಳನ್ನು ನೀಡಿದ್ದರು ಪ್ರಮುಖವಾಗಿ ಅಚ್ಛೇದಿನ್ ಹೆಸರಿನಲ್ಲಿ ಮತ ಪಡೆದ ಬಿಜೆಪಿಯವರು ಪ್ರತಿಯೊಬ್ಬರಿಗೂ 15 ಲಕ್ಷ ಖಾತೆಗೆ ಹಾಕುತ್ತೇವೆ, ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಬೆಲೆ ಇಳಿಸುತ್ತೇವೆ ಎಂದು ಹೇಳಿ ದಿನನಿತ್ಯ ಏರಿಕೆ ಮಾಡಿದರು ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಯುವಕರಿಗೆ ಪ್ರತಿ ವರ್ಷವೂ2 ಕೋಟಿ ಉದ್ಯೋಗ ಎಂದು ಆಸೆ ಹುಟ್ಟಿಸಿ ಅನ್ಯಾಯ ಮಾಡಿದರು ಎಂದು ಆರೋಪಿಸಿದರು.

ಕಳೆದ 10 ವರ್ಷಗಳಲ್ಲಿ ಮೋದಿ ಮತ್ತು ಧರ್ಮದ ಅಮಲನ್ನು ತುಂಬಿಸಿ ಸಮಸ್ಯೆಗಳನ್ನು ಬದಿಗೊತ್ತಿದ್ದಾರೆ ಇದೀಗ ಸಂಸದರು, ಸಚಿವರು ಸಂವಿಧಾನ ಬದಲಾವಣೆ ಮಾತಾಡಿದ್ದಾರೆ ಮುಂದೆ ಏನಾದರೂ 400 ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಖಚಿತ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಈ ಎಲ್ಲ ಅಂಶಗಳನ್ನು ಮನಗಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ರಾಜಕೀಯ ಮಾಡಬೇಕು ಬಿಜೆಪಿಯ ಸಮಾವೇಶದಲ್ಲಿ ದಲಿತ ಸಂಘಟನೆಗಳು ಭಾಗವಹಿಸಿದ್ದು ಕೆಲವರು ಕೃಪಾ ಪೋಷಕ ನಾಟಕ ಮಂಡಳಿಯ ಏಜೆಂಟರು ಅಲ್ಲಿದ್ದಾರೆ ಅವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ವಿಜಯನರಸಿಂಹ, ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಬೆಂಗಳೂರು ವಿಭಾಗದ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಗೋವಿಂದರಾಜು, ವೆಂಕಟೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 hour ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago