ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.
ಅನಂತ್ ಕುಮಾರ್ ಹೆಗಡೆ ಹೇಳಿಕೆ ಸಂವಿಧಾನದಕ್ಕೆ ಮಾಡಿದ ಅಪಮಾನ ಹಾಗೂ ಅಕ್ಷಮ್ಯ ಅಪರಾಧ, ಕಾಂಗ್ರೆಸ್ ಪಕ್ಷವು ಇಂತಹ ಕ್ಷುಲ್ಲಕ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ, ಇದರ ವಿರುದ್ಧ ಕಾಂಗ್ರೆಸ್ ವತಿಯಿಂದ ತೀವ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗಡೆ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.
ಪದೇ ಪದೇ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನ ನೀಡುವ ಮೂಲಕ ಜನರಲ್ಲಿ ಗೊಂದಲ ಹಾಗೂ ದ್ವೇಷಮಯ ವಾತವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿರುವುದನ್ನ ಬಿಜೆಪಿ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಇದುವರೆಗೂ ವಿರೋಧಿಸಿಲ್ಲ. 8 ದಿನಗಳೊಳಗಾಗಿ ಅನಂತ ಕುಮಾರ್ ಹೆಗಡೆ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಅವನೊಬ್ಬ ಅಯೋಗ್ಯ ಅವನಿಗೆ ನಾನು ಗೌರವ ಕೊಡುವುದಿಲ್ಲ, ಗೌರವ ಕೊಡುವಂತಹದನ್ನು ಅವನು ಉಳಿಸಿಕೊಂಡಿಲ್ಲ. ಅವನು ಸಂಸದಾರಾಗಿ ಪ್ರಮಾಣವಚನ ಸ್ಪೀಕಾರ ಮಾಡಿದ್ದು, ಇದೇ ಸಂವಿದಾನದ ಅಡಿಯಲ್ಲಿ ಅನ್ನೋದು ಮರೆತು ಇವತ್ತು ಸಂವಿದಾನದ ವಿರೋದವಾಗಿ ಮಾತನಾಡುತ್ತಾನೆ ಎಂದು ಎರಕವಚನದಲ್ಲೇ ವಾಗ್ದಾಳಿ ನಡೆಸಿದರು.
ಚುನಾವಣೆ ಬಾಂಡ್ ಬಹಿರಂಗ ಮಾಡಿದರೆ ಬಿಜೆಪಿಗೆ ಭಾರೀ ಮುಖಭಂಗ ಆಗುತ್ತದೆ. ಹೀಗಾಗಿ ಬಿಜೆಪಿಯು ಜನರ ಗಮನವನ್ನ ಬೇರೆ ಕಡೆ ತಪ್ಪಿಸಲು ಸಿಎಎ ಜಾರಿ ಮಾಡಿದೆ ಎಂದರು.
ಈ ವೇಳೆ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೆಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…