ಸಂವಿಧಾನ ಜಾಗೃತಿ ಜಾಥಗೆ ಅಗತ್ಯ ಸಿದ್ಧತೆ ಕೈಗೊಳ್ಳಿ:‌ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ  ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.

ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು,  ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ  ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು.

ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು.

ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

6 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

7 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

12 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

13 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago