ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು, ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು.
ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು.
ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…