ಕರ್ನಾಟಕ ಸರ್ಕಾರದ ವತಿಯಿಂದ ಭಾರತದ ಸಂವಿಧಾನವು ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಿಂದ ಫೆಬ್ರವರಿ 23 ರವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನವರಿ 26 ರಿಂದ ಫೆಬ್ರವರಿ 01 ರವರೆಗೆ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಫೆಬ್ರವರಿ 02 ರಿಂದ 09 ರವರೆಗೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಫೆಬ್ರವರಿ 10 ರಿಂದ ಫೆಬ್ರವರಿ 17 ರವರೆಗೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಫೆಬ್ರವರಿ 18 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ ಈಗಾಗಲೇ ದೇವನಹಳ್ಳಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಬೈಕ್ ರ‍್ಯಾಲಿ, ಸೈಕಲ್ ರ‍್ಯಾಲಿ, ಟ್ರಾಕ್ಟರ್ ರ‍್ಯಾಲಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರದಿಂದ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬೈಕ್ ರ‍್ಯಾಲಿ, ಸೈಕಲ್ ರ‍್ಯಾಲಿ, ಟ್ರಾಕ್ಟರ್ ರ‍್ಯಾಲಿ, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ, ದಲಿತ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ (DD social welfare Bangalore rural), ಫೇಸ್ಬುಕ್ (Ddswd rural), ಇನ್ಸ್ಟಾಗ್ರಾಮ್ (ddswdrural) ಈ ಖಾತೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಪೋಸ್ಟ್ ಮಾಡಲಾಗುತ್ತಿದ್ದು, ಖಾತೆಗಳನ್ನು ಫಾಲೋ ಮಾಡಿ ಪ್ರತಿದಿನ ಪೋಸ್ಟ್ ಲೈಕ್ ಮತ್ತು ಶೇರ್ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್.ಅನುರಾಧ ರವರು ಮನವಿ ಮಾಡಿದ್ದಾರೆ.