ಸಂವಿಧಾನ ಜಾಗೃತಿ ಜಾಥವನ್ನು ಯಶಸ್ವಿಗೊಳಿಸಲು ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧ ಕರೆ

ಕರ್ನಾಟಕ ಸರ್ಕಾರದ ವತಿಯಿಂದ ಭಾರತದ ಸಂವಿಧಾನವು ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಿಂದ ಫೆಬ್ರವರಿ 23 ರವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನವರಿ 26 ರಿಂದ ಫೆಬ್ರವರಿ 01 ರವರೆಗೆ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಫೆಬ್ರವರಿ 02 ರಿಂದ 09 ರವರೆಗೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಫೆಬ್ರವರಿ 10 ರಿಂದ ಫೆಬ್ರವರಿ 17 ರವರೆಗೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಫೆಬ್ರವರಿ 18 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಈಗಾಗಲೇ ದೇವನಹಳ್ಳಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಬೈಕ್ ರ‍್ಯಾಲಿ, ಸೈಕಲ್ ರ‍್ಯಾಲಿ, ಟ್ರಾಕ್ಟರ್ ರ‍್ಯಾಲಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರದಿಂದ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ.

ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬೈಕ್ ರ‍್ಯಾಲಿ, ಸೈಕಲ್ ರ‍್ಯಾಲಿ, ಟ್ರಾಕ್ಟರ್ ರ‍್ಯಾಲಿ, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವೇಷಭೂಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿವಿಧ ಪ್ರಗತಿ ಪರ ಸಂಘಟಣೆಗಳು, ಸ್ವಸಹಾಯ ಸಂಘ, ದಲಿತ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ (DD social welfare Bangalore rural), ಫೇಸ್ಬುಕ್ (Ddswd rural), ಇನ್ಸ್ಟಾಗ್ರಾಮ್ (ddswdrural) ಈ ಖಾತೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಪೋಸ್ಟ್ ಮಾಡಲಾಗುತ್ತಿದ್ದು, ಖಾತೆಗಳನ್ನು ಫಾಲೋ ಮಾಡಿ ಪ್ರತಿದಿನ ಪೋಸ್ಟ್ ಲೈಕ್ ಮತ್ತು ಶೇರ್ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್.ಅನುರಾಧ ರವರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago