ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಂವಿಧಾನ ಜಾಗೃತಿ ಮೂಡಿಸುವಂತಹ ರಥವನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿ, ಕಳಶಗಳನ್ನು ಹೊತ್ತು ಕಾಲ್ನಡಿಗೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
ಇದೇ ಸಂದರ್ಭದಲ್ಲಿ ವಿವಿಧ ಕಲಾತಂಡಗಳ ಮೂಲಕ, ವಿದ್ಯಾರ್ಥಿಗಳನ್ನೊಳಗೊಂಡಂತೆ ಫ್ಲಾಶ್ ಕಾರ್ಡನ್ನು ಉಪಯೋಗಿಸುವ ಮೂಲಕ ಅಂಬೇಡ್ಕರ್ ಅವರ ಹಿತ ನುಡಿಗಳು ಅಶೋಕ್ತಿಗಳನ್ನು ತೋರಿಸುವ ಹಾಗೂ ಸಂವಿಧಾನದ ಹಕ್ಕು ಕರ್ತವ್ಯಗಳ ಅರಿವು ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ನಂತರ ಸಂವಿಧಾನ ಪೀಠಿಕೆಯನ್ನು ಗ್ರಾಮಸ್ಥರಿಗೆ ಬೋಧಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಬಗ್ಗೆ ಭಾಷಣ ಮಾಡಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಹೆಗ್ಗಡಿಹಳ್ಳಿ ಗ್ರಾ.ಪಂ. ಸದಸ್ಯ ಮುನಿಕೃಷ್ಣಪ್ಪ, ಸ್ವಾತಂತ್ರ್ಯ ಬಂದಾಗಿನಿಂದಲೂ ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಸಂವಿಧಾನದಿಂದಲೇ ನಾವೆಲ್ಲ ಜೀವಿಸುತ್ತಿದ್ದೇವೆ. ಜನಸಾಮಾನ್ಯರಿಗೆ ಎಲ್ಲ ರೀತಿಯ ಸ್ಥಾನಮಾನ ನೀಡಿರುವ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯ ಬಂದಾಗ ಎಷ್ಟು ಸಂಭ್ರಮ ಪಟ್ಟಿದ್ದೇವೋ ಅದೇ ರೀತಿ ಸಂಭ್ರಮದ ವಾತಾವರಣ ಇಲ್ಲಿ ಮನೆ ಮಾಡಿದೆ ಎಂದು ಹೇಳಿದರು.
ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮಾಪತಿ ಮಾತನಾಡಿ, ಇಂದು ಸಂವಿಧಾನ ಜಾಗೃತಿ ಜಾಥಾ ತಾಲ್ಲೂಕಿಗೆ ಬಂದಿದೆ, ಜಾಥಾದಲ್ಲಿ ತಾಲ್ಲೂಕಿನ ಎಲ್ಲ ಹಂತದ ಅಧಿಕಾರಿಗಳು ಭಾಗವಹಿಸಿದ್ದಾರೆ, ಜನರಿಂದ ಉತ್ತಮ ಸ್ಫಂದನೆ ವ್ಯಕ್ತವಾಗುತ್ತಿದೆ. ಜಾಥಾ ತಾಲೂಕಿನಲ್ಲಿ ಒಂದು ವಾರಗಳ ಕಾಲ ಸಂಚರಿಸಿ ನೆಲಮಂಗಲ ತಾಲ್ಲೂಕಿಗೆ ಹೊರಡಲಿದೆ ಎಂದರು.
ನಂತರ ಮೆಳೆಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದ ಮೂಲಕ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮಸ್ಥರು ಸ್ವಾಗತಿಸಿ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯಹನುಮಣ್ಣ, ಮೆಳೆಕೋಟೆ ಗ್ರಾ.ಪಂ.ಅಧ್ಯಕ್ಷ ಬಿ.ಎನ್ ಶ್ರೀನಿವಾಸ್, ಜೆಡಿಎಸ್ ಮುಖಂಡ ಗೌರಿಶ್, ಕಾಂಗ್ರೆಸ್ ಜಿಲ್ಲಾ ಉಪಾದ್ಯಕ್ಷರಾದ ಎಸ್.ಡಿ ಮುನಿರಾಜು, ಜಾಗೃತಿ ಮತ್ತು ಉಸ್ತುವಾರಿ ಸದಸ್ಯ ರಾಮಣ್ಣ, ಮಂಜುನಾಥ, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಎಲ್ಲಾ ವಾರ್ಡನ್ ಗಳು, ಸ್ವಸಹಾಯ ಸಂಘದವರು ಉಪಸ್ಥಿತರಿದ್ದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…