ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…