Categories: ಮೈಸೂರು

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ- ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಕಳವಳ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು‌ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

7 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

12 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

15 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago