ಕೋಲಾರ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ ಕೆ.ವೈ ನಂಜೇಗೌಡ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾಕಾಲೇಜು ವಿಧ್ಯಾರ್ಥಿಗಳ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ರಸ್ತೆಯ ಚೊಕ್ಕಂಡಹಳ್ಳಿಯಿಂದ ಕೋಲಾರ ನಗರ ಮಾರ್ಗವಾಗಿ ರಾಮಸಂದ್ರ ಗಡಿಯವರಗಿನ 55 ಕಿಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎಲ್ಲಾ ಜಾತಿ ಧರ್ಮ ಪಕ್ಷ ಬಿಟ್ಟು ಸಂವಿಧಾನದ ಆಶಯಗಳ ಒಳಗಡೆ ನಾವು ಇದ್ದೇವೆ ಸಂವಿಧಾನ ಇದ್ದರೆ ಅಷ್ಟೇ ನಮ್ಮ ಉಳಿಗಾಲ ಅದನ್ನು ಮರೆತ ಬದುಕು ಇಲ್ಲವಾಗಿದೆ ಸಿದ್ದರಾಮಯ್ಯ ಅವರು ಒಳ್ಳೆಯ ತೀರ್ಮಾನಕ್ಕೆ ಜಿಲ್ಲೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂದು ಸಾಬೀತು ಮಾಡಿದ್ದಾರೆ ಎಂದರು.
ಪ್ರಜಾಪ್ರಭುತ್ವದಿಂದ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ ಅದು ಒಂದು ಸ್ವಾತಂತ್ರ್ಯ ಮತ್ತು ಅವಕಾಶಗಳಾಗಿದೆ ಧ್ವನಿ ಇಲ್ಲದವರಿಗೆ ಧ್ವನಿಯಾಗುತ್ತದೆ. ಸಾಮಾಜಿಕ ನ್ಯಾಯ ಕಾಪಾಡುವ ಬಲಿಷ್ಠ ವ್ಯವಸ್ಥೆ ಇದಾಗಿದ್ದು ಇದರ ರಕ್ಷಣೆ ನಮ್ಮ ಹೊಣೆಯಾಗಿದೆ ಎಂದರು
ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಸ್ಪಿ ಬಿ.ನಿಖಿಲ್, ಕೆಜಿಎಫ್ ಎಸ್ಪಿ ಶಾಂತಕುಮಾರ್, ಡಿಎಫ್ಓ ಏಡುಕೊಂಡಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಮಂಗಳಾ, ತಹಶಿಲ್ದಾರ್ ನಯನಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ,ಮುಂತಾದವರು ಇದ್ದರು.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…