Categories: ಕೋಲಾರ

ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ-ಕೆ.ವೈ ನಂಜೇಗೌಡ

ಕೋಲಾರ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ‌ ಕೆ.ವೈ ನಂಜೇಗೌಡ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾಕಾಲೇಜು ವಿಧ್ಯಾರ್ಥಿಗಳ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ರಸ್ತೆಯ ಚೊಕ್ಕಂಡಹಳ್ಳಿಯಿಂದ ಕೋಲಾರ ನಗರ ಮಾರ್ಗವಾಗಿ ರಾಮಸಂದ್ರ ಗಡಿಯವರಗಿನ 55 ಕಿಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎಲ್ಲಾ ಜಾತಿ ಧರ್ಮ ಪಕ್ಷ ಬಿಟ್ಟು ಸಂವಿಧಾನದ ಆಶಯಗಳ ಒಳಗಡೆ ನಾವು ಇದ್ದೇವೆ ಸಂವಿಧಾನ ಇದ್ದರೆ ಅಷ್ಟೇ ನಮ್ಮ ಉಳಿಗಾಲ ಅದನ್ನು ಮರೆತ ಬದುಕು ಇಲ್ಲವಾಗಿದೆ ಸಿದ್ದರಾಮಯ್ಯ ಅವರು ಒಳ್ಳೆಯ ತೀರ್ಮಾನಕ್ಕೆ ಜಿಲ್ಲೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂದು ಸಾಬೀತು ಮಾಡಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯ ಪಡೆದ ನಂತರ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಅಂಬೇಡ್ಕರ್ ಕೊಟ್ಟ ಸಂವಿಧಾನವೇ ಸಾಕ್ಷಿಯಾಗಿದೆ ಸಂವಿಧಾನದ ಅಡಿಯಲ್ಲಿಯೇ ಅವಕಾಶಗಳನ್ನು ಪಡೆಯಬೇಕು ಅವರ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಪ್ರಜಾಪ್ರಭುತ್ವದಿಂದ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ ಅದು ಒಂದು ಸ್ವಾತಂತ್ರ್ಯ ಮತ್ತು ಅವಕಾಶಗಳಾಗಿದೆ ಧ್ವನಿ ಇಲ್ಲದವರಿಗೆ ಧ್ವನಿಯಾಗುತ್ತದೆ. ಸಾಮಾಜಿಕ ನ್ಯಾಯ ಕಾಪಾಡುವ ಬಲಿಷ್ಠ ವ್ಯವಸ್ಥೆ ಇದಾಗಿದ್ದು ಇದರ ರಕ್ಷಣೆ ನಮ್ಮ ಹೊಣೆಯಾಗಿದೆ ಎಂದರು‌

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಸ್ಪಿ ಬಿ.ನಿಖಿಲ್, ಕೆಜಿಎಫ್ ಎಸ್ಪಿ ಶಾಂತಕುಮಾರ್, ಡಿಎಫ್ಓ ಏಡುಕೊಂಡಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಮಂಗಳಾ, ತಹಶಿಲ್ದಾರ್ ನಯನಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ,ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

45 minutes ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

3 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

16 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

18 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

21 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

24 hours ago