ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ, ಅಸ್ಪೃಶ್ಯತೆಯ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲಿ ಒಬ್ಬರು, ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ, ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯುತ್ತಾರೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಡಾ. ಬಿ.ಆರ್ ಅಂಬೇಡ್ಕರ್ ಓದು” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರು ಸಮಾಜ ಸುಧಾರಕ, ಶಿಕ್ಷಣ ತಜ್ಞ, ಕ್ರಿಯಾಶೀಲ ಚಿಂತನೆಗಳುಳ್ಳ ತಾತ್ವಿಕ ಪ್ರಬಂಧಕರಾಗಿದ್ದರು. ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಇವರು ರಾಜಕೀಯ ಮುತ್ಸದ್ಧಿಗಳು ಆಗಿದ್ದರು, ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಪಟ್ಟಿದ್ದಾರೆ, ಡಾ. ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ, ಮಾಹಿತಿ ಸಂಕೇತ, ಭಾರತೀಯ ಆರ್ಥಿಕತೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಶ್ರಮವಹಿಸಿದ್ದರು, ಕೈಗಾರಿಕೀಕರಣ, ಭಾರತದ ತೆರಿಗೆ ನೀತಿ, ಭಾರತೀಯ ಕೃಷಿ ಪದ್ಧತಿ, ಲಿಂಗ ಸಮಾನತೆ, ಮಾತೃತ್ವ ಮಸೂದೆ, ಭ್ರಾತೃತ್ವದ ಕುರಿತ ವಿಚಾರಗಳ ಬಗ್ಗೆ ಚಿಂತಿಸಿದ ಮಹಾನ್ ಚೇತನ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್.ಕು.ಮಿರ್ಚಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್, ಕುವೆಂಪು ಇಂತಹ ಮಹನೀಯರ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನ ವೃದ್ಧಿಯಾಗುತ್ತದೆ ಎಂದರು.
ಬಹುಮಾನ ವಿತರಣೆ:
ಆಶುಭಾಷಣ, ಕವನ ವಾಚನ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ದೀಕ್ಷಿತ, ಹೇಮ, ನಿಖಿತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಟಿ. ಮಹಾಂತೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕು, ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು, ಮೊಬೈಲ್ ಒಂದು ಗ್ರಂಥ ಭಂಡಾರ ಇದ್ದ ಹಾಗೆ ಮೊಬೈಲ್ ನಿಂದ ಸಿಗುವ ಒಳ್ಳೆಯ ವಿಚಾರಗಳನ್ನು ಮಾತ್ರ ಗ್ರಹಿಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪರಿವರ್ತನಾ ಟ್ರಸ್ಟ್ ನ ಕಾರ್ಯದರ್ಶಿ ಮೂರ್ತಿ, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಟಿ.ಜಿ ಮಂಜುನಾಥ, ಕನ್ನಡ ವಿಭಾಗದ ಹಿರಿಯ ಉಪನ್ಯಾಸಕರಾದ ಆನಂದ ಸೇರಿದಂತೆ ಇತರರು ಹಾಜರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…