ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ: ನಗರದಲ್ಲಿರುವ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಕೆ

ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ದೊಡ್ಡಬಳ್ಳಾಪುರ ನಗರದಲ್ಲಿರುವ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಈ ವೇಳೆ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ರೆಡ್ಡಿ ಮಾತನಾಡಿ, ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.

ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂದರು.

ಈ ವೇಳೆ ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು…

Leave a Reply

Your email address will not be published. Required fields are marked *

error: Content is protected !!