ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

4 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

15 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

17 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

17 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

17 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

19 hours ago