ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಹ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಹಾಗೂ ಏಕವಚನದಲ್ಲಿ ಮಾತನಾಡಿದ್ದಾರೆ. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ ಕಾಂಗ್ರೆಸ್ಸಿಗರಿಗೆ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಹೇಳಿದರು.
ನಗರದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಸಚಿವರು ಸರ್ಕಾರದ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಹಾಗೂ ಸರ್ಕಾರದ ದಿವಾಳಿತನವನ್ನು ಮರೆಮಾಚುವ ಸಲುವಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದರು.
ಅನಂತ ಕುಮಾರ್ ಹೆಗಡೆ ಅವರು ಸುಸಂಸ್ಕೃತ, ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಹೇಳಿಕೆಯನ್ನ ವಿವಾದ ಎಂದು ಬಿಂಬಿಸಲಾಗುತ್ತಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತನಾಡಿದರೆ ಅಸಭ್ಯ ಹೇಗಾಗುತ್ತದೆ? ಬಿಜೆಪಿ ಮೌನಕ್ಕೆ ಯತ್ನಾಳ್ ಹೇಳಿಕೆಯ ಅನುಮಾನಗಳು ಸೂಕ್ತವಾಗುವ ಲಕ್ಷಣಗಳಿವೆ ಎಂದರು.
ಈ ವೇಳೆ ಕದಂಬ ಬ್ರಿಗೇಡ್ ನ ಸಿ.ಕೆ.ದಯಾನಂದ, ಸುರೇಶ್, ಕನಕರಾಜ್, ಶಿವರಾಜ್, ಆಟೋ ರಮೇಶ್ ಇದ್ದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…