ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ- ಕದಂಬ ಬ್ರಿಗೇಡ್ ಅಧ್ಯಕ್ಷ ಜಿ.ಎನ್ ಪ್ರದೀಪ್ ಸಮರ್ಥನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಹ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಹಾಗೂ ಏಕವಚನದಲ್ಲಿ ಮಾತನಾಡಿದ್ದಾರೆ. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ  ಕಾಂಗ್ರೆಸ್ಸಿಗರಿಗೆ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಹೇಳಿದರು.

ನಗರದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಸಚಿವರು ಸರ್ಕಾರದ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಹಾಗೂ ಸರ್ಕಾರದ ದಿವಾಳಿತನವನ್ನು ಮರೆಮಾಚುವ ಸಲುವಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದರು.

ಅನಂತ ಕುಮಾರ್ ಹೆಗಡೆ ಅವರು ಸುಸಂಸ್ಕೃತ, ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಹೇಳಿಕೆಯನ್ನ ವಿವಾದ ಎಂದು ಬಿಂಬಿಸಲಾಗುತ್ತಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತನಾಡಿದರೆ ಅಸಭ್ಯ ಹೇಗಾಗುತ್ತದೆ? ಬಿಜೆಪಿ ಮೌನಕ್ಕೆ ಯತ್ನಾಳ್ ಹೇಳಿಕೆಯ ಅನುಮಾನಗಳು ಸೂಕ್ತವಾಗುವ ಲಕ್ಷಣಗಳಿವೆ ಎಂದರು.

ಈ ವೇಳೆ ಕದಂಬ ಬ್ರಿಗೇಡ್ ನ ಸಿ.ಕೆ.ದಯಾನಂದ, ಸುರೇಶ್, ಕನಕರಾಜ್, ಶಿವರಾಜ್, ಆಟೋ ರಮೇಶ್ ಇದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

52 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago