ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.
ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ ಪಾರ್ಲರ್ ಮ್ಯಾನೆಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.
ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.
ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…