ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹನುಮಂತಯ್ಯ.ಟಿ, ಉಪಾಧ್ಯಕ್ಷರಾಗಿ ಪದ್ಮಶ್ರೀ ಬೈರಯ್ಯ ಅವರು ಅವಿರೋಧವಾಗಿ ಇಂದು ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಗಣ್ಯರು ಹೂಮಾಲೆ ಹಾಕಿ, ಸಿಹಿ ಹಂಚಿಕೊಂಡು, ಪಟಾಕಿ ಸಿಡಿಸಿ ಅಭಿನಂದಿಸಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರವಧಿ ಒಂದು ವರ್ಷ ಇರುತ್ತದೆ. ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರು ಇದ್ದಾರೆ.
ನೂತನ ಅಧ್ಯಕ್ಷ ಹನುಮಂತಯ್ಯ.ಟಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ ಎಂದು ಹೇಳಿದರು.
ಮೊದಲು ಆದತ್ಯೆ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಯತ್ನಿಸುವೆ ಎಂದರು.
ನಂತರ ಉಪಾಧ್ಯಕ್ಷೆ ಪದ್ಮಶ್ರೀ ಬೈರಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷೆಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.
ಇದಕ್ಕೂ ಮೊದಲು ಅವಿರೋಧವಾಗಿ ಆಯ್ಕೆಯಾದ ನಂತರ ಪಂಚಾಯಿತಿಯಿಂದ ಗ್ರಾಮದ ಪ್ರಮುಖ ವೃತ್ತದವರೆಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ಹೊರಟರು.