ಸಕ್ಕರೆಗೊಲ್ಲಹಳ್ಳಿ ಪ್ರೌಢ ಶಾಲೆಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆ

ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಯಿತು.

ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಕಣ್ಮನ ಸೆಳೆದವು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು ಬ್ಯಾಂಡ್ಸೆಟ್ ವಾದ್ಯದೊಂದಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಕೂಗುತ್ತಾ ಮೆರವಣಿಗೆ ನಡೆಸಿದರು.

ನಂತರ ಮಕ್ಕಳಿಗೆ ಸಿಹಿತಿನಿಸು ಹಾಗೂ ತಿಂಡಿ ವಿತರಣೆ ಮಾಡಲಾಯಿತು.

2024 25ನೇ ಸಾಲಿನ ದೊಡ್ಡ ಬೆಳವಂಗಲ ಹೋಬಳಿ ಮಟ್ಟದದ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕರ ವಿಭಾಗದಲ್ಲಿ 100 ಮೀಟರ್, 200 ಮೀಟರ್, 400 ಮೀಟರ್, 4*100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಗುಂಡು ಎಸೆತ, ಚಕ್ರ ಎಸೆತ ಹಾಗೂ ಬರ್ಜಿ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಬಾಲಕಿಯರ ವಿಭಾಗದಲ್ಲಿ 200 ಮೀಟರ್, 400 ಮೀಟರ್, ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಗುಂಪು ಆಟಗಳಲ್ಲಿ ಬಾಲಕರ ವಿಭಾಗದಲ್ಲಿ ಕೊಕ್ಕೋ ಪ್ರಥಮ ಸ್ಥಾನ, ವಾಲಿಬಾಲ್ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಕೊಕ್ಕೋ ಪ್ರಥಮ ಸ್ಥಾನ, ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಎಲ್ಲಾ ಕ್ರೀಡಾಪಟುಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಅಭಿನಂದನೆ ಸಲ್ಲಿಸಿರುತ್ತಾರೆ.

ಈ ವೇಳೆ ಶಿಕ್ಷಕ ಸಿಬ್ಬಂದಿ, ಊರಿನ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

18 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago