ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಒನ್ ಸ್ಟಾಪ್ ಯೋಜನೆಯಡಿ ಖಾಲಿಯಿರುವ 01 ಸ್ವಚ್ಛತಾಗಾರರ/ಸೆಕ್ಯೂರಿಟಿ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅ.19ಕ್ಕೆ ಕೊನೆಯ ದಿನವಾಗಿರುತ್ತದೆ. ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಅಧೀಕ್ಷಕರು ಉಪನಿರ್ದೇಶಕರ ಕಚೇರಿ ಇವರನ್ನು ಕಚೇರಿಯ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ.
ಕಚೇರಿ ವಿಳಾಸ:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಂ. 206, 2ನೇ ಮಹಡಿ, ಜಿಲ್ಲಾ ಕೇಂದ್ರಾಡಳಿತ ಕಚೇರಿ ಸಂಕೀರ್ಣ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ ಸಂಖ್ಯೆ 080-29787445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.