ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ ಈ ಆದೇಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಅಧಿಸೂಚನೆಯ ಪ್ರಕಾರ, ವಿವಿಧ ಜಿಲ್ಲೆಗಳ ಆಡಳಿತಾತ್ಮಕ ಸಮನ್ವಯ, ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣೆ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಸಚಿವರಿಗೆ ವಹಿಸಲಾಗಿದೆ.
ಜಿಲ್ಲಾವಾರು ಜವಾಬ್ದಾರಿ ಹಂಚಿಕೆಯ ವಿವರ ಹೀಗಿದೆ:
1. ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
2. ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ.
3. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
4. ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
5. ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ ಜೊತೆಗೆ ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.
6. ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.
7. ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
8. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
9. ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.
10. ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.
11. ಬೈರತಿ ಸುರೇಶ್ ಅವರಿಗೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ
12. ಯು.ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ
13. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು, ಚಾಮರಾಜನಗರ
ರಾಜ್ಯ ಸರ್ಕಾರದ ಈ ಕ್ರಮದಿಂದ ಜಿಲ್ಲಾಮಟ್ಟದ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಸಮನ್ವಯ ಸಾಧಿಸುವುದು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡುವ ಉದ್ದೇಶ ಹೊಂದಲಾಗಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…