ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ ರಾಜಕಾರಣದಲ್ಲಿ ಯಾರಿಗೂ ನೋವುಂಟು ಮಾಡದೇ, ಯಾರನ್ನೂ ಕಡೆಗಣಿಸದೇ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡುವುದಿಲ್ಲ. ಕಡೆಗಣನೆ ಮಾಡಿರುವ ಇತಿಹಾಸವಿಲ್ಲ ಎಂದು ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಚುನಾಯಿತ ಸದಸ್ಯರನ್ನು ಆಹ್ವಾನಿಸದೇ ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ.‌ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಹಿರಿಯ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಕುಳಿತು ಮಾತಾಡಿ ಬಗೆಹರಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಾಗುವುದು ಎಂದು ತಿಳಿಸಿದರು.

ನಂತರ ಯೂತ್ ಕಾಂಗ್ರೆಸ್ ನಗರ ಬ್ಲಾಕ್ ಉಪಾಧ್ಯಕ್ಷ ಹರ್ಷಿತ್ ಕಛೇರಿಪಾಳ್ಯ ಮಾತನಾಡಿ, ನಾವು ಯುವಕರು. ಕಾಂಗ್ರೆಸ್ ಸಿದ್ಧಾಂತ ಹಾಗೂ ಹಿರಿಯರಾದ ಕೆ.ಎಚ್ ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ. ಸಚಿವರು ಎಲ್ಲರನ್ನು ಒಗ್ಗೂಡಿಸಿಕೊಂಡು ರಾಜಕಾರಣ ಮಾಡುತ್ತಾರೆ. ಸಚಿವರಲ್ಲಿ ಮೇಲು ಕೀಳು ಎಂಬ ಮನೋಭಾವನೆ ಇಲ್ಲ. ಯಾರನ್ನೂ ಕಡೆಗಣಿಸುವುದಿಲ್ಲ. ಒಂದು ವೇಳೆ ಸಚಿವರ ಗಮನಕ್ಕೆ ಬಾರದೇ ಯಾವುದಾದರು ಎಡವಟ್ಟು ಆಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ನಂತರ ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಕಂಟನಕುಂಟೆ ರಾಜಣ್ಣ ಮಾತನಾಡಿ, ಶಿಷ್ಟಚಾರ ಪ್ರಕಾರ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಇದಕ್ಕೆ ಕಾರಣ ಕೆ.ಎಚ್ ಮುನಿಯಪ್ಪನವರು ಅಲ್ಲ. ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಈ ಆರೋಪಗಳು ಕೇಳಿಬಂದಿದೆ. ಸಚಿವರು ಯಾರನ್ನೂ ಕಡೆಗಣಿಸಿಲ್ಲ. ಕಡೆಗಣಿಸುವುದಿಲ್ಲ ಎಂದರು…..

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

4 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

10 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago