ದೊಡ್ಡಬಳ್ಳಾಪುರ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಜೀರ್ ಅಹಮದ್ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಜೀರ್ ಅಹಮದ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಮೂವತ್ತೈದು ವರ್ಷಗಳ ಕಾಲ ಕಾಂಗ್ರೆಸ್ಸಿನಲ್ಲಿ ಶಿಸ್ತಿನ ಸಿಪಾಯಿಯಂತಿದ್ದ ಮುನಿಯಪ್ಪ ಅವರು ಎಂದಿಗೂ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿಲ್ಲ. ಯಾರಿಗೂ ಕೆಟ್ಟದ್ದನ್ನು ಬಯಸದ ವ್ಯಕ್ತಿತ್ವ ಅವರದ್ದು. ಇಂತ ರಾಜಕೀಯ ಮುತ್ಸದ್ಧಿ ಕುರಿತು ನಾಲಿಗೆ ಹರಿಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.
ಎಡಗೈ ಸಮುದಾಯ ಭಾವನೆಗಳಿಗೆ ಘಾಸಿಗೊಳಿಸುವ ಮೂಲಕ ನಜೀರ್ ಅಹಮದ್ ಜಾತಿನಿಂದನೆ ಮಾಡಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆರ್.ವಿ.ಮಹೇಶ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ತಾ.ಪಂ.ಮಾಜಿ ಸದಸ್ಯ ತೂಬಗೆರೆ ನಾಗರಾಜ್, ಆರ್.ವಿ.ಮನು, ದಲಿತ ಮುಖಂಡರಾದ ಮೈಲಾರಪ್ಪ, ನೇರಳಘಟ್ಟ ರಾಮು, ವೆಂಕಟೇಶಯ್ಯ, ರಾಮಚಂದ್ರಪ್ಪ, ಕೆ.ಎಚ್. ಮುನಿಯಪ್ಪ ಬೆಂಬಲಿಗರಾದ ಮನುಕುಮಾರ್ ವಿ, ನಾಗರಾಜ್ ಯಾದವ್, ರಂಗೇಗೌಡ, ಮನೋಜ್ ಇತರರು ಭಾಗವಹಿಸಿದ್ದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…