ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರೊಂದಿಗೆ ನಗರದ ಶ್ರೀ ಸುರಭಾರತಿ ಸಂಸ್ಕೃತ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನದ ಶ್ರೀ ಶಾರದಾ ದೇವಾಲಯಕ್ಕೆ ಸಂಜೆ ಭೇಟಿ ನೀಡಿದರು.
ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶ್ರೀ ಸುರಭಾರತಿ ಕ್ಷೇತ್ರಕ್ಕೆ ರಾಜ್ಯಪಾಲರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಚಿವ ಜಾರ್ಜ್, ಪ್ರತಿಷ್ಠಾನದಲ್ಲಿ ಪೂಜಾ ವಿಧಿವಿಧಾನಗಳು ಸಂಪನ್ನಗೊಳ್ಳುವವರೆಗೂ ಅವರ ಜತೆ ಇದ್ದರು.
ಶರನ್ನವರಾತ್ರಿ ಮಹೋತ್ಸವದ ಆರನೇ ದಿನದ ವಿಶೇಷ ಸಂದರ್ಭದಲ್ಲಿ ವೀಣಾಪಾಣಿಯಾದ ಶ್ರೀಶಾರದೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ವೇದ ಮಂತ್ರ ಘೋಷಗಳ ನಡುವೆ ಲಕ್ಷ ಕುಂಕುಮಾರ್ಚನೆಯೂ ನಡೆಯಿತು. ಈ ಧಾರ್ಮಿಕ ಕೈಂಕರ್ಯದಲ್ಲಿ ರಾಜ್ಯಪಾಲರು ಮತ್ತು ಸಚಿವರು ಪಾಲ್ಗೊಂಡರು.
ಡಾ. ಸುಧಾ ಯಾದವ್ ಅವರು ಪ್ರಮಾಣ ವಚನ ಸ್ವೀಕರಿಸಿ ಲೋಕಭವನ ಅಧಿಕಾರ ವಹಿಸಿಕೊಂಡ ಬಳಿಕ ಗಣ್ಯರ ಶುಭ ಹಾರೈಕೆ ಸ್ವೀಕರಿಸಿ ಶ್ರೀಶಾರದಾಂಬೆಯ ದರ್ಶನಾಶಿರ್ವಾದ ಪಡೆದುಕೊಂಡರು. ಬಳಿಕ ವಿಶೇಷ ಗೊಂಬೆಗಳ ಪ್ರದರ್ಶನವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರೊಂದಿಗೆ ಅವರ ಕುಟುಂಬಸ್ಥರೂ ಇದ್ದರು.
ಶ್ರೀ ಸುರಭಾರತೀ ಪ್ರತಿಷ್ಠಾನದ ಟ್ರಸ್ಟಿ ನಾಗರಾಜ್, ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…