ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ: ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಇಂದು

ದೊಡ್ಡಬಳ್ಳಾಪುರ: ಬೀದ‌ರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿಯಿಂದ ಜ.4 ರಂದು ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ದೊಡ್ಡರಿ ವೆಂಕಟೇಶ್ ಹೇಳಿದರು.

ಗುತ್ತಿಗೆದಾರನ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವಿದ್ದರೂ ಏನೂ ನಡೆದಿಲ್ಲ ಎಂಬಂತೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಮೃತ ಸಚಿನ್ ಪಾಂಚಾಳ ಏಳು ಪುಟ ಡೆತ್‌ನೊಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಹಿಂದೂ ಸಮಾಜದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿರುವ ಕುರಿತು ಡೆತ್ ನೋಟ್‌ನಲ್ಲಿ ಇದೆ ಎಂದು ದೂರಿದರು.

ಸಿದ್ದಲಿಂಗಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ರಾಜ್ಯದ ಪೊಲೀಸ್ ಇಲಾಖೆಯಿಂದ ಅತ್ಯಂತ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸರ್ಕಾರಿ ನೌಕರರು, ಗುತ್ತಿಗೆದಾರರು ಸೇರಿ ಆರು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬರುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು. ಸಚಿನ್‌ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕಲ್ಪಿಸಬೇಕು. ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಸೋದರಿಯರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆದಾರರ ಆತ್ಮಹತ್ಯೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರ ಇರುವುದು ಸ್ಪಷ್ಟ, ರಾಜಿನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ (ಬಂತಿ), ರವಿಕುಮಾ‌ರ್ ಸೇರಿದಂತೆ ಇತರರ ಇದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago