ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರೂ, ಎರಡನೇ ಪಟ್ಟಿಯಲ್ಲೂ ಅವರ ಹೆಸರು ಕಾಣಿಸದ ಕಾರಣ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇದರಿಂದ ಅವರ ಬೆಂಬಲಿಗರಲ್ಲಿ ಬೇಸರ ವ್ಯಕ್ತವಾಗಿದೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಿ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನೂತನ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದ್ದು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ವಿಧಾನಸಭೆಯ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿಯಾಗಿ ಆಯ್ಕೆಯಾದ ನಾಯಕರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ರಾಜಕೀಯ ಅನುಭವ ಮತ್ತು ಬದ್ಧತೆಯಿಂದ ಸರ್ಕಾರದ ಆಡಳಿತ ಮತ್ತಷ್ಟು ಚುರುಕುಗೊಳ್ಳಲಿದೆ ಎಂಬ ವಿಶ್ವಾಸವಿದೆ. ಪಾರದರ್ಶಕ, ದಕ್ಷ ಹಾಗೂ ಜನಪರ ಆಡಳಿತದ ಮೂಲಕ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸೋಣ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿಯನ್ನು ಎಲ್ಲರೂ ಒಗ್ಗಟ್ಟಿನಿಂದ ನಿಭಾಯಿಸೋಣ. ಬಲಿಷ್ಠ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಪಡೆದವರ ಪಟ್ಟಿ
ಪಿ.ಎಂ. ನರೇಂದ್ರಸ್ವಾಮಿ (ಮಳವಳ್ಳಿ) – 2ನೇ ಬಾರಿ
ಶಿವರಾಜ ತಂಗಡಗಿ (ಕನಕಗಿರಿ) – 4ನೇ ಬಾರಿ
ರುದ್ರಪ್ಪ ಲಮಾಣಿ (ಹಾವೇರಿ) – ಮೊದಲ ಬಾರಿ
ಕೆ.ಎಸ್. ಬಸವಂತಪ್ಪ (ಮಾಯಕೊಂಡ) – ಮೊದಲ ಬಾರಿ
ಬಿ. ನಾಗೇಂದ್ರ (ಬಳ್ಳಾರಿ) – 2ನೇ ಬಾರಿ
ಟಿ. ರಘುಮೂರ್ತಿ (ಚಳ್ಳಕೆರೆ) – ಮೊದಲ ಬಾರಿ
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ) – 4ನೇ ಬಾರಿ
ರಿಜ್ವಾನ್ ಅರ್ಷದ್ (ಶಿವಾಜಿನಗರ) – ಮೊದಲ ಬಾರಿ
ಸಂತೋಷ್ ಲಾಡ್ (ಕಲಘಟಗಿ) – 3ನೇ ಬಾರಿ
ಮಧು ಬಂಗಾರಪ್ಪ (ಸೊರಬ) – 2ನೇ ಬಾರಿ
ಸಿ. ಪುಟ್ಟರಂಗಶೆಟ್ಟಿ (ಚಾಮರಾಜನಗರ) – 2ನೇ ಬಾರಿ
ಎಸ್.ಎಸ್. ಮಲ್ಲಿಕಾರ್ಜುನ
ಅಜಯ್ ಸಿಂಗ್ (ಜೇವರ್ಗಿ) – ಮೊದಲ ಬಾರಿ
ಎನ್. ಚಲುವರಾಯಸ್ವಾಮಿ (ನಾಗಮಂಗಲ) – 3ನೇ ಬಾರಿ
ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ) – ಮೊದಲ ಬಾರಿ
ಎಚ್.ಸಿ. ಬಾಲಕೃಷ್ಣ (ಮಾಗಡಿ) – ಮೊದಲ ಬಾರಿ
ಎನ್.ಎಸ್. ಬೋಸರಾಜು
ಬಸವರಾಜ್ ರಾಯರೆಡ್ಡಿ (ಯಲಬುರ್ಗಾ) – 4ನೇ ಬಾರಿ
ವಿಜಯಾನಂದ ಕಾಶಪ್ಪನವರ್ (ಹುನಗುಂದ) – ಮೊದಲ ಬಾರಿ
ಲಕ್ಷ್ಮಣ ಸವದಿ (ಅಥಣಿ) – 3ನೇ ಬಾರಿ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…