ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಯಾವುವು…?

ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ. ಒಟ್ಟು 48 ವಿಷಯಗಳು ಚರ್ಚೆಯಾಗಿದೆ. ₹3,400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ. ₹2,050 ಕೋಟಿ ಬೆಂಗಳೂರು ಜಿಲ್ಲಾ ಭಾಗಕ್ಕೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಎತ್ತಿನಹೊಳೆ ಯೋಜನೆಗೆ ಒಟ್ಟು ₹23,251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ ₹17,147 ಕೋಟಿ ಖರ್ಚಾಗಿದೆ.
ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ.
24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡುತ್ತೇವೆ ಎಂದರು.

₹9,807 ಕೋಟಿ ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ ₹8,000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು ಸುಮಾರು ₹6,000 ಕೋಟಿ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡುತ್ತೇವೆ ಎಂದು ತಿಳಿಸಿದರು.

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿದ್ದು, ₹2,250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.

ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1,125.25 ಕೋಟಿ ಮಂಜೂರು ಮಾಡಲಾಗಿದೆ ಎಂದರು.

ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಬೇತಿಗೆ ₹10 ಕೋಟಿ ವೆಚ್ಚದ ಎರಡು ವಸತಿ ಶಾಲೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಕೇಂದ್ರ ವಿವಿಗೆ “ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ” ಎಂದು ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಹಾಗೂ ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲಾಗುವುದು ಎಂದು ತಿಳಿಸಿದರು.

ನಂದಿ ಬೆಟ್ಟದಲ್ಲಿ ನಡೆದ ಈ ಸಭೆಯು ಈ ವರ್ಷದ 14 ನೇ ಸಭೆಯಾಗಿದೆ. ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ, ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ ಎಂದರು.

ಈ ಸಚಿವ ಸಂಪುಟ ಸಭೆಯಲ್ಲಿ ನಾವು ₹3,400 ಕೋಟಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು ಎಂದು ತಿಳಿಸಿದರು.

ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ ₹2,525 ಕೋಟಿಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು ಎಂದರು.

ಶಿಕ್ಷಣಕ್ಕೆ ₹1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ ಎಂದರು.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ₹1,125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ ಎಂದು ತಿಳಿಸಿದರು.

ನೀರಾವರಿ ಯೋಜನೆಗಳಿಗೆ ₹1,154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂ.ಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ ಎಂದರು.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ ಎಂದು ಹೇಳಿದರು.

ಇದರ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದರು.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ.
ಒಟ್ಟಾರೆ 123 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.

ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ ಎಂದರು.

ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ.
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದರು

ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

Leave a Reply

Your email address will not be published. Required fields are marked *