ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ಜಿಎಸ್ ಟಿ ನೋಟಿಸ್: ಈ ಕುರಿತು ಸಿಎಂ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ಓದಿ…

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

• ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

• ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.

. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ.

. ರಾಜ್ಯ ಸರ್ಕಾರ ಸಂಗ್ರಹಿಸುವ ಜಿಎಸ್ ಟಿಯಲ್ಲಿ ಶೇಕಡಾ 50ರಷ್ಟು ಮೊತ್ತ ಮಾತ್ರ ರಾಜ್ಯಕ್ಕೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ತೆರಿಗೆ ಸಂಗ್ರಹವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

• ಜಿಎಸ್‌ಟಿ ನೊಟೀಸ್ ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

• ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್‌ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

• ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.

* ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು.

• ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

• ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

• ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಲಾಗುವುದು.

• ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago