Categories: ರಾಜ್ಯ

ಸತ್ಯವನ್ನು ಎದುರಿಸಲಾಗದ ಮೋದಿ ಸರ್ಕಾರ: ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಹೇಡಿತನ ಪ್ರದರ್ಶನ- ಸಿದ್ದರಾಮಯ್ಯ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದ ಹಿನ್ನೆಲೆ ಮೋದಿ ಸರ್ಕಾರ ವಿರುದ್ಧ ತೀವ್ರ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರವು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ.

ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ.

ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ.
ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ.

ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago