ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದರು.
ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಹೇಳಿದರು.
ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…