Categories: ಕೋಲಾರ

ಸದನದಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬೆಂಬಲಿಸಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸದನದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪ್ರಶ್ನೆ ಮಾಡಲು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತದ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮನವಿ ಮಾಡಿದರು.

ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸೋಮವಾರ ನಗರದಲ್ಲಿ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆಯಲ್ಲಿ ಮಾತನಾಡಿದ ಅವರು, ಸುಮಾರು 18 ವರ್ಷಗಳಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರಕಾರದಲ್ಲಿ ಪ್ರಭಾವಿಯಾಗಿದ್ದರೂ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಸ್ವತಃ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಇದ್ದು, ಆಯ್ಕೆಯಾದರೆ ನಮ್ಮೊಂದಿಗೆ ಜೊತೆಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಅನೇಕ ಬದಲಾವಣೆಯನ್ನು ತರಲಾಗಿದೆ. ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. 5 ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೂ ತಲುಪಿಸಲು ಕ್ರಮವಹಿಸಲಾಗಿದೆ. ಮಹಿಳಾ ಶಿಕ್ಷಕಿಯರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದೆ. ಡಿ.ಟಿ ಶ್ರೀನಿವಾಸ್ ಅವರು ವಿಧಾನ ಪರಿಷತ್‌ ಸದಸ್ಯರಾಗಿ ಈ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಡೆಸಲು ಯೋಜನೆಗಳನ್ನು ರೂಪಿಸಲಾಗಿದೆ. ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಕಾರ್ಯನಿರ್ವಹಿಸುತ್ತಾರೆ ಹಾಗಾಗಿ ಅವರನ್ನು ಎಂಎಲ್ಸಿ ಯಾಗಿ ಆಯ್ಕೆ ಮಾಡಿ ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿ, ಅತಿಥಿ ಶಿಕ್ಷಕರ ಸಮಸ್ಯೆಗಳ ನಿವಾರಣೆ, 7ನೇ ವೇತನ ಆಯೋಗ ಜಾರಿಗೊಳಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್‌ ಸರ್ಕಾರಗಳು ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಶಿಕ್ಷಕರಿಗೆ ಯಾವುದೇ ಪ್ರಯೋಜನವಿಲ್ಲ ಈ ಕ್ಷೇತ್ರದಿಂದ ಆಯ್ಕೆಯಾದವರು ಯಾಕೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ ಅವರು ಈ ಚುನಾವಣೆಯಲ್ಲಿ ನಿಮ್ಮ ಮುಂದೆ ಮತ ಕೇಳುವ ನೈತಿಕತೆ ಉಳಿಸಿಕೊಂಡಿಲ್ಲ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಐದು ಜಿಲ್ಲೆಗಳ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಈ ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 24 ಸಾವಿರದಷ್ಟು ಶಿಕ್ಷಕರು ಇದ್ದು ಸರಕಾರ ಇದ್ದ ಪಕ್ಷಕ್ಕೆ ಬೆಂಬಲಿಸಿದರೆ ನಿಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ ಸರ್ಕಾರಿ ನೌಕರರ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈಗಾಗಲೇ ಹಳೆ ಪಿಂಚಣಿ ಯೋಜನೆ ಜಾರಿಯಲ್ಲಿರುವ ರಾಜ್ಯಗಳಿಗೆ ತೆರಳಿ ಅಧ್ಯಯನ ಮಾಡಿ ವರದಿ ಕೊಡಲು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಅಲ್ಲದೇ 7ನೇ ವೇತನ ಜಾರಿಗೂ ಮುಂದಾಗಿದೆ ಐದು ಜಿಲ್ಲೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರಿದ್ದು ಶಿಕ್ಷಕರ ಹಿತ ಕಾಯುವ ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜಿನ ಉದಯಕುಮಾರ್, ಎಸ್.ಡಿ.ಸಿ ಕಾಲೇಜಿನ ಉಷಾ ಗಂಗಾಧರ್, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಹಾಲಿ ಸದಸ್ಯ ಅಂಬರೀಶ್, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ ಶಿವಕುಮಾರ್, ಜನಪನಹಳ್ಳಿ ನವೀನ್ ಕುಮಾರ್, ಪರ್ಜೇನಹಳ್ಳಿ ನಾಗೇಶ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಇದ್ದರು

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

57 minutes ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

4 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

5 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

19 hours ago