ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವು ಶಂಕೆ

ನೆಲಮಂಗಲ: ತಾಲೂಕಿನ ಬರದಿ ಗ್ರಾಮದಲ್ಲಿ ಸನ್‌ಸ್ಟ್ರೋಕ್‌ಗೆ ವೃದ್ಧರೊಬ್ಬರು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಶೆಟ್ಟಿಹಳ್ಳಿ ಗ್ರಾಮದ ಚಿಕ್ಕಣ್ಣ(70) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಚಿಕ್ಕಣ್ಣ ಅವರು ಬರದಿ ಗ್ರಾಮದ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಅಂಗಡಿಗೆ ತೆರಳಿದ್ದ ವೇಳೆ ಬಿಸಿಲಿನಲ್ಲಿ ನಿಂತಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತೀವ್ರ ಬಿಸಿಲಿನ ಪರಿಣಾಮ ಸನ್‌ಸ್ಟ್ರೋಕ್‌ನಿಂದಲೇ ಸಾವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..

Leave a Reply

Your email address will not be published. Required fields are marked *

error: Content is protected !!