ನೆಲಮಂಗಲ: ತಾಲೂಕಿನ ಬರದಿ ಗ್ರಾಮದಲ್ಲಿ ಸನ್‌ಸ್ಟ್ರೋಕ್‌ಗೆ ವೃದ್ಧರೊಬ್ಬರು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಶೆಟ್ಟಿಹಳ್ಳಿ ಗ್ರಾಮದ ಚಿಕ್ಕಣ್ಣ(70) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಚಿಕ್ಕಣ್ಣ ಅವರು ಬರದಿ ಗ್ರಾಮದ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಅಂಗಡಿಗೆ ತೆರಳಿದ್ದ ವೇಳೆ ಬಿಸಿಲಿನಲ್ಲಿ ನಿಂತಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತೀವ್ರ ಬಿಸಿಲಿನ ಪರಿಣಾಮ ಸನ್‌ಸ್ಟ್ರೋಕ್‌ನಿಂದಲೇ ಸಾವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…
ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…
ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…
ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…
ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…