ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ.
ರ್ಯಾಡಿಸನ್ ಬ್ಲ್ಯೂ ಹೋಟೆಲ್ನಿಂದ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ಹೊರಟು ಅಲ್ಲಿಂದ ಬಂಡೀಪುರಕ್ಕೆ ಹೆಲಿಕಾಪ್ಟರ್ನಲ್ಲಿ ಬಂದಿಳಿದು ನೇರವಾಗಿ ಸಫಾರಿಗೆ ತೆರಳಿದರು. ಮೂಲಕ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಸುಮಾರು 20 ಕಿ,ಮೀ ಸಫಾರಿ ನಡೆಸಲಿದ್ದಾರೆ ತಿಳಿದು ಬಂದಿದೆ.
ಹುಲಿ ಸಂರಕ್ಷಣಾ ಯೋಜನೆ 50 ವರ್ಷ ಪೂರೈಸಿದ ಹಿನ್ನೆಲೆ ಬಂಡಿಪುರ ಸಫಾರಿ, ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯ ಚಿತ್ರದ ಮಾವುತರಾದ ಬೊಮ್ಮನ್ ದಂಪತಿ ಜೊತೆ ಸಂವಾದ, ಹಾಗೂ ಮೈಸೂರು ಮುಕ್ತ ವಿವಿಯಲ್ಲಿ ನಡೆಯಲಿರುವ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.