“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. 18,500 ಮೆಗಾವ್ಯಾಟ್ ವರೆಗೆ ಬೇಡಿಕೆ ಇದ್ದು, ಅಷ್ಟು ವಿದ್ಯುತ್ ಪೂರೈಸಲು ಸಮರ್ಥರಾಗಿದ್ದೇವೆ. ಅದಕ್ಕಾಗಿ ವಿದ್ಯುತ್ ತಂತಿಗಳ ಬದಲಾವಣೆ, ಹೊಸಸಬ್ ಸ್ಟೇಷನ್ ಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಹೊಸದಾಗಿ ನಿರ್ಮಾಣ ಮಾಡುತ್ತಿರುವ 100 ಸಬ್ ಸ್ಟೇಷನ್ ಗಳ ಮಲಕ 3 ಸಾವಿರ ಮಗಾವ್ಯಾಟ್ ವಿದ್ಯುತ್ ಸಂಗ್ರಹಿಸಿ ಪೂರೈಸಲು ಅವಕಾಶ ಇದೆ ಈ ಪೈಕಿ 1,500 ಮೆಗಾವ್ಯಾಟ್ ವಿದ್ಯುತ್ತನ್ನು ರೈತರಿಗೆ ಪೂರೈಸಿದರೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯಲಿದೆ”, ಎಂದು ಹೇಳಿದರು.
“ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿದ್ಯುತ್ ಕ್ಷೇತ್ರಕ್ಕೆ ಆದ್ಯತೆ ನೀಡಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಯಾದ ಬಳಿಕ ವಿದ್ಯುತ್ ಉತ್ಪಾದನೆ ಮತ್ತು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಲಾಯಿತು. ರೈತರಿಗೆ ದಿನದ 7 ಗಂಟೆವಿದ್ಯುತ್ ಪೂರೈಸುವುದಾಗಿ ಮಖ್ಯಮಂತ್ರಿಗಳು ಮಾತು ಕೊಟ್ಟಿದ್ದು, ಅದನ್ನು ಜಾರಿಗೊಳಿಸಲು ನಡೆಸಿದ ಪ್ರಯತ್ನ ಫಲ ನೀಡಿದೆ. ಪ್ರತಿ ದಿನ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ”, ಎಂದು ತಿಳಿಸಿದರು.
“ವಿದ್ಯುತ್ ಉತ್ಪಾದನಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಾವಗಡದಲ್ಲಿ ಈಗಿರುವ 2050 ಮೆಗಾ ವ್ಯಾಟ್ ಉತ್ಪಾದನಾ ಸಾಮರ್ಥ್ಯದ ಸೋಲಾರ್ ಪಾರ್ಕ್ ಜತೆಗೆ ಮತ್ತೆ 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಆ ಮೂಲಕ ಪಾವಗಡ ಸೋಲಾರ್ ಪಾರ್ಕನ್ನು ಮತ್ತೆ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿ ಹೊರಹೊಮ್ಮುವಂತೆ ಮಾಡಲಾಗುವುದು”, ಎಂದರು.
“ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತೆ ನೋಡಿಕೊಳ್ಳಲು ಹೆಚ್ಚು ರೈತ ಬಜಾರ್ ಗಳನ್ನು ಸ್ಥಾಪಿಸಬೇಕು ಎಂದು ಹೇಳಿದ ಅವರು, ಸಾವಯವ ಉತ್ಪನ್ನಗಳಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆ ಇರುವುದರಿಂದ ಈ ಉತ್ಪನ್ನಗಳನ್ನು ಬೆಳೆಯಲು ರೈತರು ಆದ್ಯತೆ ನಡಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ”, ಎಂದು ಹೇಳಿದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…