Categories: ವಿಜಯನಗರ

ಸಮಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಅವರು ಮಾತನಾಡಿದರು.

ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು – ವರರಿಗೆ ಶುಭ ಹಾರೈಸಿದರು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದು ತಿಳಿಸಿದರು.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.
ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದು ಹೇಳಿದರು.

Ramesh Babu

Journalist

Share
Published by
Ramesh Babu

Recent Posts

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

8 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

10 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

20 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

24 hours ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago

ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನೂತನ ತಹಶೀಲ್ದಾರ್ ಮಲ್ಲಪ್ಪ

ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…

1 day ago