ಅ.19ರಂದು ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ‘ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಅವರು ಹೇಳಿದ್ದರು. ಗಿರೀಶ್ ಮಾತಿಗೆ ಕೆರಳಿದ ಕೆಲ ನಗರಸಭಾ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ನಡೆದಿತ್ತು. ಈ ಪ್ರಸಂಗ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆಯು ನಗರಸಭೆ ಸದಸ್ಯರ ನಡತೆಗೆ ತೀವ್ರ ಅಕ್ರೋಶಗೊಂಡು ಯಾರು ಯೋಗ್ಯರು? ಯಾರು ಅಯೋಗ್ಯರು? ಎಂದು ಸುಮಾರು 45 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ. ಇದಕ್ಕೆ ಕುಪಿತಗೊಂಡ ಗಿರೀಶ್ ಕುಂದು ಕೊರತೆ ಸಭೆಯಲ್ಲಿ ‘ಅಯೋಗ್ಯರು’ ಶಬ್ಧ ಬಳಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಗಿರೀಶ್ ಅವರ ಮಾತನ್ನು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಸರ್ಮರ್ಥಿಸಿಕೊಂಡಿದ್ದಾರೆ.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ವಸಂತ್ ಕುಮಾರ್, ನಗರದಲ್ಲಿರುವ ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಎಂದು ಕರೆದರು ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ನಂತರ ವಕೀಲ ಸತೀಶ್ ಮಾತನಾಡಿ , ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಆಯೋಗ್ಯ ಪದ ಬಳಸಿದ ಗಿರೀಶ್ ಮೇಲೆ ನಗರಸಭೆ ಕೆಲ ಸದಸ್ಯರು ಗೂಂಡಾವರ್ತನೆ ತೋರಿದ್ದಾರೆ. ಗಿರೀಶ್ ಅವರು ನಗರಸಭೆ ಅಧಿಕಾರಿಗಳು, ಸದಸ್ಯರ ಬೇಜವಾಬ್ದಾರಿತನಕ್ಕೆ ಬೇಸತ್ತು ಅಯೋಗ್ಯ ಪದ ಬಳಕೆ ಮಾಡಿದ್ದಾರೆ ಅದರಲ್ಲಿ ತಪ್ಪೇನಿದೆ? ಅವ್ಯವಸ್ಥೆಗಳ ಬಗ್ಗೆ ಪ್ರಶ್ನೆ ಮಾಡಿದವರ ಮೇಲೆ ಏಕಾಏಕಿ ಮುಗಿಬಿದ್ದು ಗಲಾಟೆ ಮಾಡುವುದು ಎಷ್ಟು ಸರಿ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನೆ ಮಾಡಿದವರ ಮೇಲೆ ಈ ರೀತಿ ದಬ್ಬಾಳಿಕೆ, ಗೂಂಡಾ ವರ್ತನೆ ಮಾಡಿರುವುದು ಖಂಡನೀಯ ಎಂದು ಆಕ್ರೋಶವ್ಯಕ್ತಪಡಿಸಿದರು.
ಗಿರೀಶ್ ಮೇಲೆ ಗೂಂಡಾವರ್ತನೆ ಮಾಡಿದವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಒತ್ತಾಯಿಸಿದರು.
ಈ ವೇಳೆ ಕಾಳೇಗೌಡ, ವಿಜಿಕುಮಾರದ, ರಮೇಶ್ ಉಪಸ್ಥಿತರಿದ್ದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…