‘ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಸಹ ಹೌದು’- ರೈತ ಮುಖಂಡ ವಸಂತ್ ಕುಮಾರ್

ಅ.19ರಂದು ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ‘ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಅವರು ಹೇಳಿದ್ದರು. ಗಿರೀಶ್ ಮಾತಿಗೆ ಕೆರಳಿದ ಕೆಲ ನಗರಸಭಾ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ನಡೆದಿತ್ತು. ಈ ಪ್ರಸಂಗ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ‌ಯು ನಗರಸಭೆ ಸದಸ್ಯರ ನಡತೆಗೆ ತೀವ್ರ ಅಕ್ರೋಶಗೊಂಡು ಯಾರು ಯೋಗ್ಯರು? ಯಾರು ಅಯೋಗ್ಯರು? ಎಂದು ಸುಮಾರು 45 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ. ಇದಕ್ಕೆ ಕುಪಿತಗೊಂಡ ಗಿರೀಶ್ ಕುಂದು ಕೊರತೆ ಸಭೆಯಲ್ಲಿ ‘ಅಯೋಗ್ಯರು’ ಶಬ್ಧ ಬಳಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಗಿರೀಶ್ ಅವರ ಮಾತನ್ನು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಸರ್ಮರ್ಥಿಸಿಕೊಂಡಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ವಸಂತ್ ಕುಮಾರ್, ನಗರದಲ್ಲಿರುವ ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಎಂದು ಕರೆದರು ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಅರ್ಕಾವತಿ ನದಿಪಾತ್ರದ ಕೆರೆಗಳು ಕಲುಷಿತಗೊಂಡು ಜಲಚರ ಪ್ರಾಣಿಗಳು ಮಾರಣಹೋಮ ಆಗುತ್ತಿವೆ. ಕೆರೆ ಕಲುಷಿತಗೊಳ್ಳುತ್ತಿರುವುದನ್ನ ತಡೆಯಲು ಹಾಗೂ ಕಲುಷಿತಗೊಂಡಿರುವ ಕೆರೆಗಳನ್ನ ಶುದ್ಧೀಕರಣ ಮಾಡಲು ಯಾರಿಗೂ ಯೋಗ್ಯತೆ ಇಲ್ಲ. ಕುಡಿಯಲು ನೀರನ್ನು ಪಡೆಯಲು ಹೋರಾಟ, ಪ್ರತಿಭಟನೆ, ಧರಣಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ವಕೀಲ ಸತೀಶ್ ಮಾತನಾಡಿ , ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಆಯೋಗ್ಯ ಪದ ಬಳಸಿದ ಗಿರೀಶ್ ಮೇಲೆ ನಗರಸಭೆ ಕೆಲ ಸದಸ್ಯರು ಗೂಂಡಾವರ್ತನೆ ತೋರಿದ್ದಾರೆ. ಗಿರೀಶ್ ಅವರು ನಗರಸಭೆ ಅಧಿಕಾರಿಗಳು, ಸದಸ್ಯರ ಬೇಜವಾಬ್ದಾರಿತನಕ್ಕೆ ಬೇಸತ್ತು ಅಯೋಗ್ಯ ಪದ ಬಳಕೆ ಮಾಡಿದ್ದಾರೆ ಅದರಲ್ಲಿ ತಪ್ಪೇನಿದೆ? ಅವ್ಯವಸ್ಥೆಗಳ ಬಗ್ಗೆ ಪ್ರಶ್ನೆ ಮಾಡಿದವರ ಮೇಲೆ ಏಕಾಏಕಿ ಮುಗಿಬಿದ್ದು ಗಲಾಟೆ ಮಾಡುವುದು ಎಷ್ಟು ಸರಿ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನೆ ಮಾಡಿದವರ ಮೇಲೆ ಈ ರೀತಿ ದಬ್ಬಾಳಿಕೆ, ಗೂಂಡಾ ವರ್ತನೆ ಮಾಡಿರುವುದು ಖಂಡನೀಯ ಎಂದು ಆಕ್ರೋಶವ್ಯಕ್ತಪಡಿಸಿದರು.

ಗಿರೀಶ್ ಮೇಲೆ ಗೂಂಡಾವರ್ತನೆ ಮಾಡಿದವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಒತ್ತಾಯಿಸಿದರು.

ಈ ವೇಳೆ ಕಾಳೇಗೌಡ, ವಿಜಿಕುಮಾರದ, ರಮೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago