ಸಮಾಜದಲ್ಲಿ ಇನ್ನೂ ಶೇ.25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ ಕಳವಳ

ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ. ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎ‌ಂದರು.

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು.

ದುಡಿಯುವ ವರ್ಗಗಳು ಹಸಿವಿನಿಂದ ಮಲುಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು.

ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೆ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು.

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಡಾ.ಆರ್.ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಅವರು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

5 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

8 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

19 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

19 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

23 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

1 day ago