ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರ ಬಹಳ ಮುಖ್ಯ- ಎಎಸ್ ಪಿ ಪುರುಷೋತ್ತಮ್

ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.

ತಮ್ಮ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡ ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಅವರ ದೂರಿನ್ವಯ ಕಳ್ಳರ ಉಪಟಳ ಮಟ್ಟಹಾಕಲು ಪೊಲೀಸರು ತಮ್ಮ ಕಾರ್ಯವನ್ನು ನಿಭಾಯಿಸುತ್ತಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ.

ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ‌ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ತಾಲೂಕಿನಲ್ಲಿ ಜನ‌ಸ್ನೇಹಿ ಪೊಲೀಸ್ ವ್ಯವಸ್ಥೆ ಇದ್ದು ಯಾರೂ ಹಿಂಜರಿಯದೆ, ಭಯಪಡದೇ ತಮಗಾದ ಅನ್ಯಾಯದ ಬಗ್ಗೆ ದೂರು ನೀಡಿದರೆ, ಕೂಡಲೇ ಸೂಕ್ತ ತನಿಖೆಯಿಂದ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಕೆಲಸ‌ ಮಾಡಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.

ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್‌ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

2 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

3 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

3 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

10 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

11 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

14 hours ago