ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.
ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.
ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್‌ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…