ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರು ಮೊದಲು ಸಂಘಟಿತರಾಗಬೇಕು- ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಟಿಪ್ಪುವರ್ಧನ್

ಸಾಹಿತಿಗಳಾಗಿದ್ದ ಡಿ.ವಿ.ಗುಂಡಪ್ಪ ಅವರು ಪತ್ರಕರ್ತರ ಸಂಘವನ್ನು ಕಟ್ಟಿ ಬೆಳೆಸಿದವರು. ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು ಮತ್ತು ಪತ್ರಕರ್ತರು ಸಂಘಟಿತರಾಗಬೇಕು ಎಂಬುದು ಅವರ ಕನಸಾಗಿತ್ತು ಎಂದು ಕರ್ನಾಟಕ ರಾಜ್ಯ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಟಿಪ್ಪುವರ್ಧನ್ ಹೇಳಿದರು.

ಸೋಮವಾರ ನಗರದ ಕನ್ನಡ ಜಾಗೃತ ಭವನದಲ್ಲಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೊತ್ಸವ ಹಾಗೂ ತಾಲ್ಲೂಕು ಮಟ್ಟದ ನೂತ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾನಾಡಿದರು.

ಆರ್‌ಎನ್‌ಐ ಹೊಂದಿರುವ ಎಲ್ಲ ಪತ್ರಕರ್ತರಿಗೂ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಟಿಪ್ಪುವರ್ಧನ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದೆ, ಯಾವುದೇ ಫಲಾಪೇಕ್ಷೆ ಇಲ್ಲದೆ ಊರೂರು ಸುತ್ತಿ ಸುದ್ದಿ ಮಾಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಆರ್‌ಎನ್‌ಐ ಹೊಂದಿರುವ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

 ಜನಸಾಮಾನ್ಯರಿಗೆ ನೀಡುವ ಸೌಲಭ್ಯಗಳಿಂದ ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ ಆದರೆ, ಸರ್ಕಾರಕ್ಕೆ ನಷ್ಟಮಾಡುವುದೇ ರಾಜಕಾರಣಿಗಳು ಎಂದು ಆರೋಪಿಸಿದರು.

 ಸ್ವಾತಂತ್ರ್ಯ ಹೋರಾಟದಿಂದ ಇಲ್ಲಿಯವರೆಗೆ ಜನಪರವಾಗಿ ನಡೆದ ಎಲ್ಲಾ ಹೋರಾಟಗಳಲ್ಲಿ ಪತ್ರಕರ್ತರ ಪಾತ್ರವನ್ನು ತೆಗೆದು ಹಾವಂತಿಲ್ಲ. ಸ್ವಾತಂತ್ರ್ಯ ಹೋರಾಟಗಾರರಾದ ಪ್ರಮುಖ ರೂವಾರಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಹ ಒಬ್ಬ ಪತ್ರಕರ್ತರಾಗಿದ್ದವರು ಎಂದರು.

ನಗರಸಭೆಯ ಮಸಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ತನ.ಪ್ರಭುದೇವ್ ಅವರು ಮಾತನಾಡಿ ಕನ್ನಡ ಮತ್ತು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಹಲವಾರು ಪತ್ರಕರ್ತರನ್ನು ಸ್ಮರಿಸಿದ ಅಚರು, ಆರಂಭದಿಂದಲೂ ಪತ್ರಕರ್ತರು ಸಮಾಜದ ಸ್ವಾಸ್ಥ್ಯ ಕಾಪಾಡಿಕೊಂಡು ಬರುತ್ತಿದ್ದಾರೆ, ರೈತ, ಕಾರ್ಮಿಕ, ದಲಿತ ಮತ್ತು ಕನ್ನಡಪರ ಚಳುವಳಗೆ ಅಪಾರವಾದ ಕೊಡುಗೆ ನೀಡಿದ್ದಾರೆ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಜೊತೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದು‌ ಶ್ಲಾಘನೀಯ ಎಂದರು.

ಇದೇ ಸಮಾರಂಭದಲ್ಲಿ ಎಲೆಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಂವಿಧಾನದ ಪೀಠಿಕೆ ಹಂಚಿ, ನಾನುನುಡಿಗಾಗಿ ಶ್ರಮಿಸಿದ ವಿವಿಧ ಸಂಘಟನೆಗಳ ಮುಖಂಡರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ರಾಜ್ಯ ಸಮಿತಿ ಸದಸ್ಯರಾದ ಆರ್.ಅಶ್ವತ್ಥ್, ಜೆಡಿ,ಸತೀಶ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚನ್ನಿಗರಾಯಪ್ಪ, ಉಪಾಧ್ಯಕ್ಷ ಎಸ್.ಆರ್.ಕಿರಣ್ ಕುಮಾರ್, ನಿರ್ದೇಶಕರಾದ ಹೆಚ್.ಎಸ್.ವೆಂಕಟೇಶ್, ಟಿ.ಡಿ‌ಶಶಿಕುಮಾರ್, ತಾಲ್ಲೂಕು ಅಧ್ಯಕ್ಷ ರಾಜುಸಣ್ಣಕ್ಕಿ, ಗೌರವಾಧ್ಯಕ್ಷ ಎನ್.ಸಿ.ಶಿವಾನಂದ್, ಉಪಾಧ್ಯಕ್ಷ ಎಲ್.ಆನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್, ಖಜಾಂಚಿ ಬಿಪಿ.ಹರಿಕುಮಾರ್, ನಿರ್ದೇಶಕರಾದವಡಿ.ಸಿ.ಚೌಡರಾಜ್, ಭರತ್ ಕುಮಾರ್, ಸುಬ್ರಮಣಿ, ಎಆರ್‌.ಶ್ರೀನಿವಾಸಮೂರ್ತಿ, ಮಹೇಶ್ ಹೆಚ್.ಬಿ ಮುನಿರಾಜು ಸೇರಿದಂತೆ ಹಲವಾರು ಜನ ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

32 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

47 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

7 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago